ಅಕ್ಕೈ ಪದ್ಮಶಾಲಿ ಭಾರತೀಯ ಲಿಂಗತ್ವ ಅಲ್ಪಸಂಖ್ಯಾತ ಪರ ಹೋರಾಟಗಾರ್ತಿ ಮತ್ತು ರಾಜಕಾರಣಿ. ತಮ್ಮ ಹೋರಾಟ ಮತ್ತು ಸಾಮಾಜಿಕ ಸೇವೆಗಾಗಿ ಕರ್ನಾಟಕ ರಾಜ್ಯದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಪರಿಷತ್ತಿನ ಸದ್ಯರಾಗಿರುವ ಅಕ್ಕೈ ಪದ್ಮಶಾಲಿ ಲಿಂಗತ್ವ ಅಲ್ಪಸಂಖ್ಯಾತರ ಸಾಮಾಜಿಕ, ರಾಜಕೀಯ ಶ್ರೇಯೋಭಿವೃದ್ಧಿಗಾಗಿ ಹೋರಾಟಗಳನ್ನು ರೂಪಿಸಿದ್ದು ಜಾಗತಿಕವಾಗಿ ಗುರುತಿಸಿಕೊಂಡಿದ್ದಾರೆ.