Choose Language:

B Jayashree

ಕನ್ನಡ ರಂಗಭೂಮಿಯ ಪ್ರಖ್ಯಾತ ನಟಿ, ಗಾಯಕಿ, ರಂಗಕರ್ಮಿ ಬಿ. ಜಯಶ್ರೀ ಅವರು ವೃತ್ತಿರಂಗಭೂಮಿಯ ಹೆಸರಾಂತ ಕಲಾವಿದ ಗುಬ್ಬಿ ವೀರಣ್ಣ ಅವರ ಮೊಮ್ಮಗಳು. ತಮ್ಮ ನಾಲ್ಕನೇ ವಯಸ್ಸಿನಲ್ಲಿಯೇ ರಂಗಭೂಮಿಗೆ ಪದಾರ್ಪಣೆ ಮಾಡಿದ ಜಯಶ್ರೀ ಅವರು ರಂಗಭೂಮಿಯ ಅಭಿಯದಿಂದ ಗಳಿಸಿದ ಜನಪ್ರಿಯತೆ ಇವರನ್ನು ನಾಟಕಗಳ ನಿರ್ದೇಶನಕ್ಕೆ ಕೊಂಡೊಯ್ದಿತು. ಇವರು ಪ್ರಸಿದ್ಧ ‘ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ’ ದಿಂದ ಪದವಿ ಪಡೆದಿದ್ದಾರೆ. ರಂಗಭೂಮಿ ಮತ್ತು ಚಲನಚಿತ್ರದಲ್ಲಿ ಕೆಲಸ ಮಾಡುತ್ತಿರುವ ಹಿರಿಯ ಕಲಾವಿದರಲ್ಲಿ ಒಬ್ಬರಾಗಿದ್ದಾರೆ. ಪ್ರಸಿದ್ಧ ಗಾಯಕರೂ ಆಗಿದ್ದಾರೆ. ಇವರ ಸಾಧನೆಯನ್ನು ಗುರುತಿಸಿ ಸರ್ಕಾರ ಅವರನ್ನು 2010 ರಲ್ಲಿ ರಾಜ್ಯಸಭೆ ಸದಸ್ಯರನ್ನಾಗಿ ಆಯ್ಕೆ ಮಾಡಿದೆ. ರಂಗಾಯಣದ ಮುಖ್ಯಸ್ಥರಾಗಿ ಕೆಲಸ ಮಾಡಿರುವ ಜಯಶ್ರೀ ಅವರಿಗೆ 2013ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo