Choose Language:

B Suresha

ಕನ್ನಡ ರಂಗಭೂಮಿ ಮತ್ತು ಚಲನಚಿತ್ರ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಬಿ. ಸುರೇಶ ಅವರು 1973ರಿಂದಲೇ ಬಾಲನಟರಾಗಿ ಹವ್ಯಾಸಿ ರಂಗಭೂಮಿಯಲ್ಲಿ ಕಾಣಿಸಿಕೊಂಡರು. 1976 ರಲ್ಲಿ ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ‘ಘಟಶ್ರಾದ್ದ’ ಚಿತ್ರದಲ್ಲಿ ಬಾಲನಟರಾಗಿ ಕಾಣಿಸಿಕೊಳ್ಳುವ ಮೂಲಕ ಚಿತ್ರರಂಗಕ್ಕೂ ಪಾದಾರ್ಪಣೆ ಮಾಡಿದರು. 1988 ರಲ್ಲಿ ‘ಮಿಥಿಲೆಯ ಸೀತೆಯರು’ ನಿರ್ದೇಶನ ಮಾಡಿದ ಅವರು 15 ಕ್ಕೂ ಹೆಚ್ಚಿನ ಚಿತ್ರಗಳಿಗೆ ಸಂಭಾಷಣೆ ರಚಿಸಿದ್ದಾರೆ.

‘ಅರ್ಥ’ ಚಿತ್ರಕ್ಕಾಗಿ ಅವರಿಗೆ 2002-2003 ನೇ ಸಾಲಿನ ಪ್ರಥಮ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತಿದೆ. 2010 ರಲ್ಲಿ ಇವರು ನಿರ್ದೇಶಿಸಿದ “ಪುಟ್ಟಕ್ಕನ ಹೈವೇ” ಚಿತ್ರವೂ ರಾಷ್ಟ್ರ ಪ್ರಶಸ್ತಿ ಹಾಗೂ ಅತ್ಯುತ್ತಮ ಪ್ರಾದೇಶಿಕ ಭಾಷಾ ಚಿತ್ರ ಎಂತಲೂ, ಅತ್ಯುತ್ತಮ ಚಿತ್ರಕತೆಗೆ ರಾಜ್ಯ ಪ್ರಶಸ್ತಿಯನ್ನೂ ಪಡೆದುಕೊಂಡಿದೆ.

ಸುಮಾರು 20 ಕ್ಕೂ ಹೆಚ್ಚು ಕನ್ನಡ ಧಾರಾವಾಹಿಗಳನ್ನು ರಚಿಸಿ, ನಿರ್ದೇಶಿಸಿರುವ ಹೆಗ್ಗಳಿಕೆ ಇವರದು. ‘ಷಾಪುರದ ಸೀನಿಂಗಿ ಸತ್ಯ’ ನಾಟಕವು 1997ರ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದುಕೊಂಡಿದೆ. ಬೆಂಗಳೂರು ದೂರದರ್ಶನಕ್ಕಾಗಿ ಅವರು ನಿರ್ದೇಶಿಸಿದ್ದ ದೈನಿಕ ಧಾರಾವಾಹಿ ‘ಸಾಧನೆ’- 2001 ರ ಸಾಲಿನಲ್ಲಿ ಅತ್ಯುತ್ತಮ ಧಾರಾವಾಹಿ, ಅತ್ಯುತ್ತಮ ನಿರ್ದೇಶನ, ಅತ್ಯುತ್ತಮ ಲೇಖಕ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ‘ಗುಬ್ಬಚ್ಚಿಗಳು’ ಚಿತ್ರಕ್ಕೆ 2007 ರ ಅತ್ಯುತ್ತಮ ಮಕ್ಕಳ ಚಿತ್ರ, ಸ್ವರ್ಣಕಮಲ ಪದಕ ಹಾಗೂ ನ್ಯೂಯಾರ್ಕ್ ಇಂಡಿಪೆಂಡೆಂಟ್ ಫಿಲ್ಮ್ ಅಂಡ್ ವಿಡಿಯೋ ಫೇಸ್ಟಿವಲ್ ನಿಂದ ‘ಅತ್ಯುತ್ತಮ ಸಂಸಾರಿಕ ಚಿತ್ರ’ ಪ್ರಶಸ್ತಿ ದೊರೆತಿದೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo