Choose Language:

Beluru Raghunandan

ಬೇಲೂರು ರಘುನಂದನ್

ಕನ್ನಡ ರಂಗಭೂಮಿ, ಸಾಹಿತ್ಯಲೋಕಗಳೆರಡರಲ್ಲೂ ತಮ್ಮನ್ನು ತೊಡಗಿಸಿಕೊಂಡಿರುವ ಬೇಲೂರು ರಘುನಂದನ ಮೂರು ಚಿನ್ನದ ಪದಕಗಳೊಂದಿಗೆ ಕನ್ನಡದಲ್ಲಿ ಎಂ.ಎ.ಪದವೀಧರರು. ಹಂಪಿಯ ಕನ್ನಡ ವಿಶ್ವವಿದ್ಯಾಲಯದಿಂದ ‘ದೇಜಗೌ ಅವರ ಅನಲಾ ಮತ್ತು ದುಷ್ಟಬುದ್ದಿ ನಾಟಕಗಳು’ ವಿಷಯವಾಗಿ ಎಂ.ಫಿಲ್ ಮತ್ತು ಕನ್ನಡ ರಂಗಭೂಮಿ ಮತ್ತು ಸಿನಿಮಾ: ವ್ಯಕ್ತಿ ನೆಲೆಯ ತಾತ್ವಿಕ ಚಿಂತನೆಗಳು’ ವಿಷಯವಾಗಿ ಪಿಎಚ್ ಡಿ ಪದವೀಧರರು. ಕವಿ ಹಾಗೂ ನಾಟಕಕಾರರಾಗಿ ಗುರುತಿಸಿಕೊಂಡಿರುವ ರಘುನಂದನ್ ಅವರ ಹಲವು ಕಾವ್ಯ ಸಂಕಲನ, ಕಟ್ಟುಪದಗಳ ಗುಚ್ಛ, ಮಕ್ಕಳ ಕತಾ ಸಾಹಿತ್ಯ, ಪ್ರವಾಸ ಸಾಹಿತ್ಯ ಹಾಗೂ ನಾಟಕ ಪುಸ್ತಕಗಳು ಪ್ರಕಟಗೊಂಡಿವೆ.

ಸಾಹಿತ್ಯ ಮತ್ತು ರಂಗಭೂಮಿಯ ಸೇವೆಗಾಗಿ ಕನ್ನಡ ಸಂಘರ್ಷ ಸಮಿತಿ ಕೊಡಮಾಡುವ ಕುವೆಂಪು ಯುವಕವಿ ಪುರಸ್ಕಾರ, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ನೀಡುವ ಜ್ಯೋತಿ ಪುರಸ್ಕಾರ, ಬೇಲೂರು ತಾಲೂಕು ರಾಜ್ಯೋತ್ಸವ ಪ್ರಶಸ್ತಿ, ಬೇಂದ್ರೆ ಗ್ರಂಥ ಬಹುಮಾನ, ಸಾಲು ಮರದ ತಿಮ್ಮಕ್ಕ ಹಸುರು ಪ್ರಶಸ್ತಿ, ನಾ.ಡಿಸೋಜಾ ಎಚ್.ಎಸ್.ವಿ.ಪುಟಾಣಿ ಸಾಹಿತ್ಯ ಪುರಸ್ಕಾರ, ತೇಜಸ್ವಿ ಕಟ್ಟೀಮನಿ ಯುವ ಪುರಸ್ಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ ನಡೆಸಿದ ಮಕ್ಕಳ ನಾಟಕ ರಚನಾ ಸ್ಪರ್ಧೆಯಲ್ಲಿ ಬಹುಮಾನ,

ಬೆಂಗಳೂರು ಕಿರು ನಾಟಕೋತ್ಸವದಲ್ಲಿ ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿ. ಹಶ್ಮಿ ಥಿಯೇಟರ್ ನಡೆಸಿದ ಎನಾಕ್ಟ್ ರಾಷ್ಟ್ರೀಯ ರಂಗೋತ್ಸವದಲ್ಲಿ ಅತ್ಯುತ್ತಮ ನಾಟಕಕಾರ ಪ್ರಶಸ್ತಿ ಸೇರಿದಂತೆ ಹಲವು ಗೌರವ ಪ್ರಶಸ್ತಿಗಳು ಲಭಿಸಿವೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo