Choose Language:

Dhanajaya Kumble

ಕವಿ, ವಿಮರ್ಶಕ ಧನಂಜಯ ಕುಂಬ್ಳೆ ಅವರು ಕಲ್ಲಿಕೋಟೆ ವಿಶ್ವವಿದ್ಯಾಲಯದಲ್ಲಿ ಬಿ. ಎ. ಪದವಿ, ಕಣ್ಣೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ‘ಅರುಣಾಬ್ಜ ಮತ್ತು ಕುಮಾರವ್ಯಾಸ: ತೌಲನಿಕ ಅಧ್ಯಯನ’ದ ಮೇಲೆ ಮಹಾಪ್ರಬಂಧ ರಚಿಸಿ ಪಿಎಚ್‌.ಡಿ ಪಡೆದಿದ್ದಾರೆ. ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯ, ಮೂಡುಬಿದಿರೆಯ ಆಳ್ವಾಸ್ ಪದವಿ ಕಾಲೇಜುಗಳಲ್ಲಿ ಕನ್ನಡ ಉಪನ್ಯಾಸಕರಾಗಿದ್ದ ಇವರು ಸದ್ಯ ಮಂಗಳೂರು ವಿಶ್ವವಿದ್ಯಾಲಯದ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿದ್ದಾರೆ.

ಅವರ ಮೊದಲ ಕವನ ಸಂಕಲನ ‘ಮೊದಲ ಪಾಪ’ 1998ರಲ್ಲಿ ಪ್ರಕಟವಾಯಿತು. ನಂತರ ‘ನಾನು ಮತ್ತು ಆಕಾಶ’ – ವಿಮರ್ಶಾ ಲೇಖನಗಳು, ‘ಹಾಡು ಕಲಿತ ಹಕ್ಕಿಗೆ’ – ಕವನ ಸಂಕಲನ, ‘ಕಜಂಪಾಡಿ ರಾಮ’, ಪ್ರಗತಿಶೀಲ ಲೇಖಕ ನಿರಂಜನ, ಬಹುಭಾಷಾ ವಿದ್ವಾಂಸ ವೆಂಕಟರಾಜ ಪುಣಿಂಚತ್ತಾಯ ಸೇರಿದಂತೆ ಹಲವು ಮಹತ್ವದ ಕೃತಿಗಳನ್ನು ರಚಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಯಕ್ಷಗಾನ ಅಧ್ಯಯನ ಕೇಂದ್ರದ ಸಂಯೋಜಕರಾಗಿದ್ದ ಇವರು ಈಗ ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕರಾಗಿ, ಪ್ರಸಾರಾಂಗದ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳ ಸಾಧನೆಗಾಗಿ ಪೇಜಾವರ ಸದಾಶಿವ ರಾವ್ ರಾಜ್ಯಮಟ್ಟದ ಪ್ರಶಸ್ತಿ, ಕಾಂತಾವರ ಕನ್ನಡ ಸಂಘದ ಪುನರೂರು ಟ್ರಸ್ಟ್ ನ ಮುದ್ದಣ ಕಾವ್ಯ ಪ್ರಶಸ್ತಿ, ಸಾಹಿತ್ಯ ಯುವ ಸಾಧಕ ಪ್ರಶಸ್ತಿ, ಕನ್ನಡ ಪುಸ್ತಕ ಪ್ರಾಧಿಕಾರದ ಯುವ ಬರಹಗಾರರ ಪ್ರೋತ್ಸಾಹ ಅನುದಾನ, ರೋಟರಿ ಕ್ಲಬ್ ಕಾಸರಗೋಡುವಿನ ಸೃಜನಶೀಲ ಬರಹಗಾರ ಪ್ರಶಸ್ತಿ, 2020ನೇ ಸಾಲಿನ ಮಯೂರವರ್ಮ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಹಲವು ಗೌರವ ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo