Choose Language:

Gajanan Sharma

ಪ್ರಸಿದ್ಧ ನಟ, ನಾಟಕಕಾರ, ನಿರ್ದೇಶಕ ಮತ್ತು ಸಾಹಿತಿಯಾಗಿರುವ ಡಾ. ಗಜಾನನ ಶರ್ಮಾ ಅವರು ವೃತ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸಿದ್ದಾರೆ.

‘ಪುನರ್ವಸು’, ‘ಚೆನ್ನಭೈರಾದೇವಿ’, ‘ಪ್ರಮೇಯ’ ಇವರ ಪ್ರಮುಖ ಕಾದಂಬರಿಗಳು. ‘ನಾಣಿ ಭಟ್ಟನ ಸ್ವರ್ಗದ ಕನಸು’, ‘ಗೊಂಬೆ ರಾವಣ’, ‘ಆಗ ಮತ್ತು ಸುಂದರಿ’, ‘ಹಂಚಿನಮನೆ ಪರಸಪ್ಪ’, ‘ಪುಸ್ತಕ ಪಾಂಡಿತ್ಯ’ ಮುಂತಾದ ಹತ್ತಕ್ಕೂ ಹೆಚ್ಚು ಮಕ್ಕಳ ನಾಟಕ, ‘ಕನ್ನಂಬಾಡಿಯ ಕಟ್ಟದಿದ್ದರೆ’, ‘ದ್ವಂದ್ವ ದ್ವಾಪರ’, ‘ಬೆಳ್ಳಿಬೆಳಕಿನ ಹಿಂದೆ’ ಮುಂತಾದ ನಾಟಕಗಳನ್ನು ರಚಿಸಿದ್ದಾರೆ.
ವಿಶ್ವೇಶ್ವರಯ್ಯನವರ ವೃತ್ತಿ ಜೀವನದ ಆತ್ಮಕಥೆಯನ್ನು ಕನ್ನಡಕ್ಕೆ ‘ನನ್ನ ವೃತ್ತಿ ಜೀವನದ ನೆನಪುಗಳು’ ಎಂಬ ಶೀರ್ಷಿಕೆಯಡಿ ಅನುವಾದಿಸಿದ್ದಾರೆ. ‘ಕನ್ನಡದಲ್ಲಿ ಮಕ್ಕಳ ನಾಟಕ ಮತ್ತು ರಂಗಭೂಮಿ’ ಎಂಬ ಮಹಾಪ್ರಬಂಧಕ್ಕಾಗಿ ಹಂಪಿಯ ಕನ್ನಡ ವಿಶ್ವವಿದ್ಯಾ ಲಯದಿಂದ ಡಾಕ್ಟೋರೇಟ್ ಪದವಿ ಪಡೆದಿದ್ದಾರೆ. “ನನ್ನ ವೃತ್ತಿಯ ನೆನಪುಗಳು” ಕೃತಿಯಲ್ಲಿ ಅವರ ವೃತ್ತಿ ಬದುಕಿನ ಅನುಭವವನ್ನು ದಾಖಲಿಸಿದ್ದಾರೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo