Choose Language:

Geeta Vasant

ಗೀತಾ ವಸಂತ- ಕವಯತ್ರಿ, ಕಥೆಗಾರ್ತಿ ಮತ್ತು ವಿಮರ್ಶಕಿ. ಗೀತಾ ಅವರು ಹುಟ್ಟಿದ್ದು ಶಿರಸಿಯ ಎಕ್ಕಂಬಿ ಸಮೀಪದ ಕಾಡನಡುವಿನ ಒಂಟಿಮನೆ ಕಾಟೀಮನೆಯಲ್ಲಿ 1976 ಏಪ್ರಿಲ್ 20 ರಂದು  . ಈಗ ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸಿರುವ ಅವರು ಡಿವಿಜಿ ಕನ್ನಡ ಅಧ್ಯಯನ ಕೇಂದ್ರದಲ್ಲಿ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

‘ಚೌಕಟ್ಟಿನಾಚೆಯವರು’ ಇವರ ಪ್ರಮುಖ ಕಥಾ ಸಂಕಲನ. ’ಹೊಸಿಲಾಚೆ ಹೊಸ ಬದುಕು , ಪರಿಮಳದ ಬೀಜ’ ಗೀತಾ ವಸಂತ ಅವರ ಕವನಸಂಕಲನಗಳು. ಬೆಳಕಿನ ಬೀಜ, ಬೇಂದ್ರೆ ಕಾವ್ಯ – ಅವಧೂತ ಪ್ರಜ್ಞೆ, ಹೊಸ ದಿಗಂತದ ಹೊಸದಾರಿ ಇವರ ಪ್ರಮುಖ ವಿಮರ್ಶಾ ಕೃತಿಗಳು, ಸ್ವಾತಂತ್ರ್ಯೋತ್ತರ ಕಥನ ಸಾಹಿತ್ಯದಲ್ಲಿ ಸ್ತ್ರೀವಾದಿ ಚಿಂತನೆಗಳು ಅವರ ಮಹಾಪ್ರಬಂಧ. ಪಾಟೀಲಪುಟ್ಟಪ್ಪ ಕಥಾ ಪ್ರಶಸ್ತಿ, ದೇವಾಂಗನಾ ಶಾಸ್ತ್ರಿ ಸಾಹಿತ್ಯ ಪ್ರಶಸ್ತಿ, ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ರತ್ನಮ್ಮ ಹೆಗಡೆ ಪ್ರಶಸ್ತಿಗಳು ದೊರೆತಿವೆ.

 

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo