Choose Language:

H N Arathi

ಪತ್ರಕರ್ತೆ, ಕವಿ ಎಚ್.ಎನ್. ಆರತಿ ಅವರು ಮೂಲತಃ ಬೆಂಗಳೂರಿನವರು. ಬೆಂಗಳೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಅವರು 2 ಚಿನ್ನದ ಪದಕಗಳೊಂದಿಗೆ ಸ್ನಾತಕೋತ್ತರ ಪದವಿ ಪೂರೈಸಿದರು. ದೂರದರ್ಶನದ ‘ಥಟ್ ಅಂತ ಹೇಳಿ’ ಜನಪ್ರಿಯ ಕಾರ್ಯಕ್ರಮದ ಮೂಲಕ ವೃತ್ತಿ ಬದುಕನ್ನು ಆರಂಭಿಸಿ 2500 ಸಂಚಿಕೆಗಳನ್ನು ನಿರ್ದೇಶಿಸಿದ ಕೀರ್ತಿ ಆರತಿ ಅವರಿಗೆ ಸಲ್ಲುತ್ತದೆ.

ಸಮಕಾಲೀನಕ್ಕೆ ತಮ್ಮ ಕಾವ್ಯದ ಮೂಲಕ ಸ್ಪಂದಿಸುವ ಇವರು ಅನುವಾದಕ್ಕೂ ಆಗಾಗ ಭೇಟಿ ನೀಡುತ್ತಾರೆ. ಪ್ರವಾಸ, ನಾಟಕ ಅವರ ಮತ್ತಷ್ಟು ಆಸಕ್ತಿಯ ವಿಸ್ತಾರಗಳು.

‘ಓಕುಳಿ, ಬಾ ಹೇಳಿಕಳಿಸೋಣ ಹಗಲಿಗೆ, ಸ್ಮೋಕಿಂಗ್ ಝೋನ್’, ‘ಬೆಟ್ಟದಡಿಯ ಬಿದಿರ ಹೂ’ ಸೇರಿದಂತೆ ಅನೇಕ ಕೃತಿಗಳನ್ನು ಪ್ರಕಟಿಸಿದ್ದಾರೆ. ಅಲ್ಲದೇ ಅವರ ಹಲವಾರು ಕವನಗಳು ಇಂಗ್ಲಿಷ್, ಸ್ಲೊವೆನಿಯನ್ ಒಳಗೊಂಡಂತೆ ಇತರೆ 6 ಭಾಷೆಗಳಿಗೆ ಅನುವಾದಗೊಂಡಿವೆ.

‘ಓಕುಳಿ’ ಕವನ ಸಂಕಲನಕ್ಕೆ ಲೇಖಕಿಯರ ಪರಿಷತ್ತಿನ ರಾಜ್ಯಮಟ್ಟದ ಪ್ರಶಸ್ತಿ, ‘ಬಾ ಹೇಳಿಕಳಿಸೋಣ ಹಗಲಿಗೆ’ ಕರ್ನಾಟಕ ಲೇಖಕಿಯರ ಸಂಘದ 1997ರ ‘ಅತ್ಯುತ್ತಮ ಕೃತಿ’ ಪ್ರಶಸ್ತಿ ಸೇರಿದಂತೆ ಹಲವು ಗೌರವ ಪ್ರಶಸ್ತಿಗಳು ಲಭಿಸಿವೆ. ಮಾತ್ರವಲ್ಲದೆ ಆರತಿ ಅವರು ಅಂತರರಾಷ್ಟ್ರೀಯ ಮಟ್ಟದ ಕವಿ ಸಮ್ಮೇಳನದಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo