Choose Language:

H S Arpana

ಲೇಖಕಿ ಅರ್ಪಣ ಎಚ್.ಎಸ್ ಮೂಲತಃ ಶಿವಮೊಗ್ಗದವರು. ಧರ್ಮಸ್ಥಳ ಮತ್ತು ಉಜಿರೆಯಲ್ಲಿ ಪದವಿವರೆಗೆ ಓದಿದ ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಈಟಿವಿಯಲ್ಲಿ ಪತ್ರಕರ್ತೆಯಾಗಿ ವೃತ್ತಿ ಜೀವನ ಆರಂಭಿಸಿದ ಅವರು ಪ್ರಸ್ತುತ ಹೈದರಾಬಾದಿನಲ್ಲಿ ನೆಲೆಸಿದ್ದು, ಫ್ರೀಲ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದಾರೆ. ಸಾಹಿತ್ಯ ಮತ್ತು ಸಿನಿಮಾ ಅರ್ಪಣರ ಆಸಕ್ತಿಯ ಕ್ಷೇತ್ರ. ಇವರ ಅನೇಕ ಕತೆ, ಕವನ ಮತ್ತು ಲಲಿತ ಪ್ರಬಂಧಗಳು ನಾಡಿನ ಪ್ರಮುಖ ಪತ್ರಿಕೆಗಳು ಮತ್ತು ನಿಯತಕಾಲಿಕೆಗಳ ಸಾಹಿತ್ಯ ಸರ್ಧೆಗಳಲ್ಲಿ ಬಹುಮಾನ ಗಳಿಸಿವೆ. ”ಕೆಂಪು ಮತ್ತು ಇತರ ಬಹುಮಾನಿತ ಕತೆಗಳು’ ಇವರ ಮೊದಲ ಪ್ರಕಟಿತ ಕೃತಿ. 

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo