Choose Language:

H S Shivaprakash

ಹೆಚ್‌. ಎಸ್‌. ಶಿವಪ್ರಕಾಶ್ 

ಕವಿ, ನಾಟಕಕಾರ ಎಚ್.ಎಸ್.ಶಿವಪ್ರಕಾಶ್ ಅವರು ಭಾರತದ ಪ್ರಮುಖ ಕವಿಗಳಲ್ಲಿ ಒಬ್ಬರು.  ನವದೆಹಲಿಯ ಜೆ.ಎನ್.ಯು ವಿಶ್ವವಿದ್ಯಾಲಯದಲ್ಲಿ ಸೌಂದರ್ಯಶಾಸ್ತ್ರದ ಪ್ರಾಧ್ಯಾಪಕರಾಗಿದ್ದರು. ಕಾವ್ಯ, ನಾಟಕ, ಅನುವಾದ ಹೀಗೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೃಷಿ ಮಾಡಿದ್ದಾರೆ.  ಮಹಾಚೈತ್ರ, ಸುಲ್ತಾನ್ ಟಿಪ್ಪು, ಮಂಟೇಸ್ವಾಮಿ, ಮಾದರಿ ಮಾದಯ್ಯ, ಮದುವೆ ಹೆಣ್ಣು ನಾಟಕಗಳಾದರೆ ಮಳೆ ಬಿದ್ದ ನೆಲದಲ್ಲ, ಮಿಲರೇಪ, ಅಣುಕ್ಷಣ ಚರಿತೆ, ಸೂರ್ಯಜಲ, ಮಳೆಯೇ ಮಂಟಪ ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಇವರ ಕೃತಿಗಳು ಇಂಗ್ಲಿಷ್, ಫ್ರೆಂಚ್, ಇಟಾಲಿಯನ್, ಸ್ಪ್ಯಾನಿಷ್, ಜರ್ಮನ್, ಪೋಲಿಷ್, ಹಿಂದಿ, ಮಲಯಾಳಂ, ಮರಾಠಿ, ತಮಿಳು ಮತ್ತು ತೆಲುಗಿಗೆ ಅನುವಾದಗೊಂಡಿದೆ. ಹೆಚ್. ಎಸ್. ಶಿವಪ್ರಕಾಶರಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಗೌರವ, ಕೇಂದ್ರ ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ, ಕರ್ನಾಟಕ ಸಾಹಿತ್ಯ ಅಕಾಡಮಿಯಿಂದ ನಾಲ್ಕು ಕೃತಿಗಳಿಗೆ ಬಹುಮಾನ, ರಾಜ್ಯೋತ್ಸವ ಪ್ರಶಸ್ತಿ, ಕುವೆಂಪು ಭಾಷಾ ಭಾರತಿ ಪ್ರಶಸ್ತಿಗಳು ಸಂದಿವೆ. 

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo