Choose Language:

Ja Na Tejashree

ಖ್ಯಾತ ಕವಿ, ಅನುವಾದಕಿ ಜ.ನಾ. ತೇಜಶ್ರೀ ಅವರು ಇಂಗ್ಲೀಷ್ ಸಾಹಿತ್ಯದಲ್ಲಿ ಸ್ನಾತಕೋತ್ತಪ ಪದವಿ, ಭಾಷಾಂತರ ಡಿಪ್ಲೊಮಾ ಪದವೀಧರರಾಗಿದ್ದು ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಒಂದು ವರ್ಷ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ‘ಟ್ಯಾಗೋರ್ ಪೀಠ’ದಲ್ಲಿ ಸಂಶೋಧನಾ ಸಹಾಯಕಿಯಾಗಿ ಕಾರ್ಯ ನಿರ್ವಹಿಸಿ‌ದ್ದಾರೆ.
ಲಯ, ತಿಳಿಗೊಳ, ಕತ್ತಲೆಯ ಬೆಳಗು, ಅವನರಿವಲ್ಲಿ, ಉಸುಬುಂಡೆ, ಮಾಗಿಕಾಲದ ಸಾಲುಗಳು (ಕವನ ಸಂಕಲನಗಳು) ಭಾರತ ರಾಷ್ಟ್ರೀಯ ಚಳುವಳಿ, ಚೀನಿ ತತ್ವಶಾಸ್ತ್ರದ ಕತೆ, ಕಡಲ ತಡಿಯ ಗುಡಾರ, ಬೆತ್ತಲೆ ಫಕೀರ, ಇರುವೆ ಮತ್ತು ಪಾರಿವಾಳ (ಅನುವಾದಿತ ಕೃತಿಗಳು) ’ನೀನಾಸಂ’ಗಾಗಿ ವೋಲೆ ಸೋಯಿಂಕಾನ ಸಾವು ಮತ್ತು ರಾಜನ ಕುದುರೆ ಸವಾರ’ ನಾಟಕದ ಅನುವಾದ. ಕವಿ ರವೀಂದ್ರ, ಬೆಟ್ಟದ ಮೇಲಿನ ಬೆಳಕು (ಸಂಪಾದಿತ) ಅವರ ಪ್ರಕಟಿತ ಕೃತಿಗಳು.
ಯು.ಆರ್.ಅನಂತಮೂರ್ತಿಯವರ ‘ಸುರಗಿ’ ಆತ್ಮಕತೆಯ ಸಂಯೋಜನೆ ಮತ್ತು ನಿರೂಪಣೆ ಮಾಡಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಟಿ.ಎಸ್.ರಂಗರಾವ್ ದತ್ತಿ ಬಹುಮಾನ, ನೀಲಗಂಗಾ ದತ್ತಿ, ವಸುದೇವಭೂಪಾಲಂ ದತ್ತಿ, ಡಿ.ಸಿ.ಅನಂತಸ್ವಾಮಿ ದತ್ತಿ ಪ್ರಶಸ್ತಿ ಸೇರಿದಂತೆ ಹಲವು ಗೌರವ, ಪ್ರಶಸ್ತಿಗಳು ಲಭಿಸಿವೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo