Choose Language:

Jogi (Girish Rao Hatwar)

ಜೋಗಿ ( ಗಿರೀಶ್ ರಾವ್ ಹತ್ವಾರ್)
ಹಿರಿಯ ಪತ್ರಕರ್ತ, ಲೇಖಕ ಜೋಗಿ ಅವರು ಜಾನಕಿ, ಜೋಗಿ, ಎಚ್.ಗಿರೀಶ್ ರಾವ್, ಸತ್ಯವ್ರತ ಸೇರಿದಂತೆ ನಾನಾ ಅಂಕಿತ ನಾಮಗಳ ಮೂಲಕ ತಮ್ಮದೇ ಓದುಗ ಬಳಗವನ್ನು ಹೊಂದಿದ್ದಾರೆ. ವೃತ್ತಿಯಲ್ಲಿ ಪತ್ರಕರ್ತರಾಗಿದ್ದರೂ ಅತ್ಯಂತ ಸೃಜನಶೀಲ ಲೇಖಕರಾಗಿ ಖ್ಯಾತಿ ಗಳಿಸಿದ್ದಾರೆ.
ಹಾಯ್‌ ಬೆಂಗಳೂರು ವಾರಪತ್ರಿಕೆಯಲ್ಲಿ ‘ರವಿ ಕಾಣದ್ದು’, ‘ಜಾನಕಿ ಕಾಲಂ’ ಅಂಕಣ ಬರಹಗಳ ಮೂಲಕ ಓದುಗರಿಗೆ ಪರಿಚಯವಾದ ಜೋಗಿ ಅವರು ಪ್ರಸ್ತುತ ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಪುರವಣಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
‘ನದಿಯ ನೆನಪಿನ ಹಂಗು’, ‘ಯಾಮಿನಿ’, ‘ಚಿಟ್ಟೆ ಹೆಜ್ಜೆ ಜಾಡು’, ‘ಹಿಟ್ ವಿಕೆಟ್’, ಊರ್ಮಿಳಾ, ಮಾಯಾಕಿನ್ನರಿ, ಗುರುವಾಯನಕೆರೆ, ದೇವರ ಹುಚ್ಚು, ಚಿಕ್ಕಪ್ಪ, ಚೈತ್ರ ವೈಶಾಖ ವಸಂತ, ಎಲ್ಲಾನು ಮಾಡುವುದು ಹೊಟ್ಟೆಗಾಗಿ, ವಿರಹದ ಸಂಕ್ಷಿಪ್ತ ಪದಕೋಶ, ಬೆಂಗಳೂರು, ಬಿ ಕ್ಯಾಪಿಟಲ್, ಸೀಳುನಾಲಿಗೆ, ಜೋಗಿ ಕತೆಗಳು, ಕಾಡು ಹಾದಿಯ ಕತೆಗಳು, ರಾಯಭಾಗದ ರಹಸ್ಯ ರಾತ್ರಿ, ಮುಂತಾದ ಕೃತಿಗಳನ್ನು ರಚಿಸಿದ್ದಾರೆ.
ಇವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo