Choose Language:

Keshav Malagi

ಕನ್ನಡದ ಪ್ರಮುಖ ಕಥೆಗಾರರಲ್ಲಿ ಒಬ್ಬರಾಗಿರುವ ಕೇಶವ ಮಳಗಿ ಅವರು 80ರ ದಶಕದಲ್ಲಿ ಬರವಣಿಗೆ ಆರಂಭಿಸಿದರು. ಆಪ್ತವಾಗಿ ಕತೆ ಹೇಳುವಂತೆ ಬರೆಯುವ ಮಳಗಿ ಅವರ ‘ಕಡಲ ತೆರೆಗೆ ದಂಡೆ’, ‘ಮಾಗಿ ಮೂವತ್ತೈದು’, ‘ವೆನ್ನೆಲ ದೊರೆಸಾನಿ’, ‘ಹೊಳೆ ಬದಿಯ ಬೆಳಗು’ ಸಂಕಲನಗಳು ಪ್ರಕಟವಾಗಿವೆ.
‘ಕುಂಕುಮ ಭೂಮಿ’, ‘ಅಂಗಧ ಧರೆ’ ಕೇಶವ ಮಳಗಿ ಅವರ ಕಾದಂಬರಿಗಳಾದರೆ, ‘ನೇರಳೆ ಮರ’ ರೂಪಕ ಲೋಕ ಕಥನ. ಸೊಗಸಾದ ರೀತಿಯಲ್ಲಿ ಅನುವಾದ ಮಾಡಿರುವ ಮಳಗಿ ಅವರು ‘ಬೋರಿಸ್ ಪಾಸ್ತರ್‌ನಾಕ್: ವಾಚಿಕೆ’, “ನೀಲಿ ಕಡಲ ಹಕ್ಕಿ’ (ಕತೆಗಳು), ‘ಮದನೋತ್ಸವ’ (ಕಾದಂಬರಿ), ‘ಸಂಕಥನ’ (ಫ್ರೆಂಚ್ ಸಾಹಿತ್ಯ, ಸಮಾಜ, ಸಂಸ್ಕೃತಿ, ಸಾಹಿತ್ಯ ವಿಮರ್ಶೆ), ‘ಕಡಲಾಚೆಯ ಚೆಲುವೆ’ (ಫ್ರೆಂಚ್ ಕಥೆಗಳು), ಆಲ್ಬರ್ಟ್‌ ಕಾಮು (ತರುಣ ವಾಚಿಕೆ) ಪುಸ್ತಕಗಳನ್ನು ಪ್ರಕಟಿಸಿದ್ದಾರೆ.
‘ಅಕಥ ಕಥಾ’ ಸೇರಿದಂತೆ ಹಲವು ಮಹತ್ವದ ಕೃತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿರುವ ಅವರು ಸದ್ಯ ಬೆಂಗಳೂರಿನ ಸೃಷ್ಟಿ ಇನ್ಸ್ಟಿಟ್ಯೂಟ್ ಆಫ್ ಆರ್ಟ್, ಡಿಸೈನ್ ಆ್ಯಂಡ್ ಟೆಕ್ನಾಲಜಿಯಲ್ಲಿ ಬೋಧಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo