Choose Language:

Madhu Y N

ಸೃಜನಶೀಲ ಬರಹಗಾರ ಮಧು ವೈ.ಎನ್. ತುಮಕೂರಿನ ನವೋದಯ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿ, ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯಿಂದ ಎಲೆಕ್ಟ್ರಾನಿಕ್‌ ಆ್ಯಂಡ್‌ ಕಮ್ಯುನಿಕೇಶನ್ ವಿಭಾಗದಲ್ಲಿ ಎಂಜಿನಿಯರಿಂಗ್ ಪದವಿ, ಬಿಟ್ಸ್ ಪಿಲಾನಿಯಿಂದ ಸಾಫ್ಟ್‌ವೇರ್ ಸಿಸ್ಟಮ್‌ನಲ್ಲಿ ಮಾಸ್ಟರ್ಸ್ ಡಿಗ್ರಿ ಪಡೆದಿದ್ದಾರೆ. 2008ರಲ್ಲಿ ಮೈಸೂರಿನ ಇನ್ಫೋಸಿಸ್ ಸಂಸ್ಥೆಯಲ್ಲಿ ವೃತ್ತಿ ಬದುಕನ್ನು ಆರಂಭಿಸಿದ ಅವರು ಸದ್ಯ ಐಬಿಎಮ್ ಉದ್ಯೋಗಿಯಾಗಿದ್ದು ಬೆಂಗಳೂರಿನಲ್ಲಿ ವಾಸವಿದ್ದಾರೆ.

‘ಕಾರೇಹಣ್ಣು’, ‘ಫೀಫೋ’, ‘ಡಾರ್ಕ್ ವೆಬ್’, ‘ಕನಸೇ ಕಾಡುಮಲ್ಲಿಗೆ’ ಅವರ ಕೃತಿಗಳು. ಅವರ ‘ಕಾರೇಹಣ್ಣು’ ಕಥಾ ಸಂಕಲನವು 2019ರ ‘ಈ ಹೊತ್ತಿಗೆ’ ಕಥಾ ಸಂಕಲನ ಪ್ರಶಸ್ತಿಗೆ ಭಾಜನವಾಗಿದೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo