Choose Language:

Nagachandrika Bhat

ಪದ್ಮನಾಭ ಭಟ್‌ ಶೇವ್ಕಾರ

ಪತ್ರಕರ್ತ, ಬರಹಗಾರ ಪದ್ಮನಾಭ ಭಟ್‌ ಅವರು ಜನಿಸಿದ್ದು 1990 ಜೂನ್‌ 27ರಂದು. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶೇವ್ಕಾರ ಗ್ರಾಮದಲ್ಲಿ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಪ್ರಜಾವಾಣಿಯಲ್ಲಿ ವರದಿಗಾರ ಹಾಗೂ ಉಪ ಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದರು. ಸುಧಾ ವಾರಪತ್ರಿಕೆಯ ಉಪಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಅವರು ಸದ್ಯ ವಯಾಕಾಂ 18 (Viacom18) ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸಿನಿಮಾ, ರಂಗಭೂಮಿ, ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಇರುವ ಇವರ ಚೊಚ್ಚಲ ಕೃತಿ ಕೇಪಿನ ಡಬ್ಬಿ. ಈ ಕಥಾ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ, ಕರ್ನಾಟಕ ಸಾಹಿತ್ಯ ಅಕಾಡೆಮಿ ದತ್ತಿ ಪ್ರಶಸ್ತಿ, ಛಂದ ಪುಸ್ತಕ ಬಹುಮಾನ, ಮಾಸ್ತಿ ಕಥಾ ಪುರಸ್ಕಾರ, ಟೋಟೊ ಪುರಸ್ಕಾರ ಹಾಗೂ ಇತರ ಪ್ರಶಸ್ತಿಗಳು ಸಂದಿವೆ.

 

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo