ಪ್ರೊ ಓ. ಎಲ್. ನಾಗಭೂಷಣ ಸ್ವಾಮಿಯವರು ಕನ್ನಡದ ಖ್ಯಾತ ವಿಮರ್ಶಕರು ಹಾಗೂ ಅನುವಾದಕರು. ಬೆಂಗಳೂರು ಸಮೀಪದ ಹೊಸಕೋಟೆಯಲ್ಲಿ ಜನಿಸಿದ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ ಇಂಗ್ಲಿಷ್, ಮತ್ತು ಎಂ.ಎ. ಕನ್ನಡ(1975)ಪದವಿ ಪಡೆದಿದ್ದಾರೆ. ಇಂಗ್ಲೀಷ್ ಅಧ್ಯಾಪಕರಾಗಿ ನಿವೃತ್ತಿ ಹೊಂದಿದ್ದಾರೆ. ಕುವೆಂಪು ಭಾಷಾ ಭಾರತಿ, ಕೇಂದ್ರ ಸಾಹಿತ್ಯ ಅಕಾಡಮಿ, ಜೆ. ಕೃಷ್ಣಮೂರ್ತಿ ಫೌಂಡೇಶನ್ ಹೀಗೆ ವಿವಿಧ ಸಂಸ್ಥೆಗಳಲ್ಲಿ ಕೆಲಸ ಮಾಡಿರುವ ಅವರು 60ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ. ಅವರ ‘ವಿಮರ್ಶೆಯ ಪರಿಭಾಷೆ’ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ, ಮೈಸೂರು ಮತ್ತು ಕರ್ನಾಟಕ ವಿಶ್ವವಿದ್ಯಾಲಯಗಳ ಬಹುಮಾನ, ಚಕೋರಿ ಅನುವಾದಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ. ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಗೌರವ ಪ್ರಶಸ್ತಿಗಳನ್ನು ಪಡೆದಿದ್ದಾರೆ.