Choose Language:

Poornima Malagimani

ಪೂರ್ಣಿಮಾ ಮಾಳಗಿಮನಿ
ಯುವ ತಲೆಮಾರಿನ ಸೃಜನಶೀಲ ಲೇಖಕಿ ಪೂರ್ಣಿಮಾ ಮಾಳಗಿಮನಿ ಚಿತ್ರದುರ್ಗದ ಎಸ್.ಜೆ.ಎಂ.ಐ.ಟಿ. ಎಂಜಿನಿಯರಿಂಗ್ ಕಾಲೇಜಿನಿಂದ ಎಲೆಕ್ಟ್ರಾನಿಕ್ಸ್ ಪದವೀಧರೆ.
ಪ್ರತಿಷ್ಠಿತ ಭಾರತೀಯ ವಾಯುಸೇನೆಯಲ್ಲಿ ಏರೊನಾಟಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಅಧಿಕಾರಿಯಾಗಿ ಆರು ವರ್ಷ ಸೇವೆ ಸಲ್ಲಿಸಿ, ಪ್ರಸ್ತುತ ಜಂಟಿ ಉಪನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪೂರ್ಣಿಮಾ ಅವರು ‘ಎನಿ ವನ್ ಬಟ್ ದಿ ಸ್ಪೌಸ್’ ಎನ್ನುವ ಇಂಗ್ಲೀಷ್ ಕಿರುಗತೆಗಳ (2017) ಸಂಕಲನ, ಇಜಯಾ ಕಾದಂಬರಿ ಸೇರಿದಂತೆ ಹಲವು ಕೃತಿಗಳನ್ನ ರಚಿಸಿದ್ದಾರೆ.
ನಾಡಿನ ವಿವಿಧ ಪತ್ರಿಕೆಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಇವರ ಹಲವಾರು ತಾಂತ್ರಿಕ ಹಾಗೂ ಸಾಹಿತ್ಯಿಕ ವಿಷಯ ಕುರಿತ ಲೇಖನಗಳು ಪ್ರಕಟವಾಗಿವೆ. 2022ನೇ ಸಾಲಿನ ‘ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾಸ್ಪರ್ಧೆ’ಯಲ್ಲಿ ಇವರ ‘ವಿನ್ನರ್ ವಿನ್ನರ್ ಚಿಕನ್ ಡಿನ್ನರ್’ ಕತೆಗೆ ಪ್ರಥಮ ಬಹುಮಾನ ಲಭಿಸಿದೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo