Choose Language:

Rajendra Chenni

ಕನ್ನಡದ ಖ್ಯಾತ ವಿಮರ್ಶಕರಲ್ಲಿ ಒಬ್ಬರಾದ ಡಾ. ರಾಜೇಂದ್ರ ಚೆನ್ನಿ ಅವರು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಾಗರಗಾಳಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ, ಮೈಸೂರು ವಿ.ವಿ.ಯಿಂದ ಪಿಎಚ್.ಡಿ ಪಡೆದ ಅವರು ಹಲವೆಡೆ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಂತರ ಕುವೆಂಪು ವಿ.ವಿ. ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ.

ಕನ್ನಡ-ಇಂಗ್ಲಿಷ್ ಎರಡೂ ಭಾಷೆಯಲ್ಲಿ ವಿಮರ್ಶೆ, ಲೇಖನ ಹಾಗೂ ಕತೆಗಳನ್ನು ಬರೆಯುತ್ತಲೇ ಜನಪರ ಚಳವಳಿಗಳಲ್ಲಿ ಭಾಗವಹಿಸಿದ್ದಾರೆ. ‘ಅಮೂರ್ತತೆ ಮತ್ತು ಪರಿಸರ’, ‘ಬೇಂದ್ರೆ ಕಾವ್ಯ ಸಂಪ್ರದಾಯ ಮತ್ತು ಸ್ವಂತಿಕೆ’, ದೇಶೀವಾದ ಸೇರಿದಂತೆ ಹಲವು ಮಹತ್ವದ ಕೃತಿಗಳನ್ನು ರಚಿಸಿರುವ ಚೆನ್ನಿ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ ಸೇರಿದಂತೆ ಹಲವು ಗೌರವ ಪ್ರಶಸ್ತಿಗಳು ಲಭಿಸಿವೆ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo