Choose Language:

Vidyarashmi Pelathadka

ಪತ್ರಿಕೋದ್ಯಮ ಮತ್ತು ಸಾಹಿತ್ಯ ಕ್ಷೇತ್ರಗಳೆರಡರಲ್ಲೂ ಸೃಜನಶೀಲವಾಗಿ ತೊಡಗಿಸಿಕೊಂಡಿರುವ ವಿದ್ಯಾರಶ್ಮಿ ಪೆಲತ್ತಡ್ಕ ಅವರು ಮಂಗಳೂರು ವಿವಿಯಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕನ್ನಡ ಪ್ರಭ, ಸುವರ್ಣ ನ್ಯೂಸ್, ವಿಜಯ ನೆಕ್ಸ್ಟ್ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವವಿದ್ದು, ಸದ್ಯ ವಿಜಯ ಕರ್ನಾಟಕ ದಿನಪತ್ರಿಕೆಯ ಲವಲವಿಕೆ ವಿಭಾಗದಲ್ಲಿ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಬರೆದ ಕವನ, ಕಥೆ, ಪ್ರಬಂಧಗಳು ಹಲವು ಪತ್ರಿಕೆ, ಸಾಹಿತ್ಯಿಕ ಜಾಲತಾಣಗಳಲ್ಲಿ ಪ್ರಕಟವಾಗಿವೆ. ‘ಗೌರೀದುಃಖ’ ಇವರ ಪ್ರಕಟಿತ ಕವನ ಸಂಕಲನ.

Subscribe Newsletter

©2024 ಬುಕ್ ಬ್ರಹ್ಮ ಪ್ರೈವೇಟ್ ಲಿಮಿಟೆಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.

ವಿನ್ಯಾಸ

verbinden logo